Talk to Sales

Benchmarks

View scores and output across OCR models spanning many document categories.

Want to run these evals on your own documents?

Talk to Sales
Page 1

2 ಥೆಸಲೋನಿಕದವರಿಗೆ 3:1

4

2 ಥೆಸಲೋನಿಕದವರಿಗೆ 3:10

ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆ ಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣಿಯನ್ನು ದಯಪಾಲಿಸಿದನು.

3

ನಮಗೋಸ್ಕರ ಪ್ರಾರ್ಥಿಸಿ

1 ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ. 2 ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)

3 ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು. 4 ನಾವು ನಿಮಗೆ ತಿಳಿಸಿದ ಸಂಗತಿಗಳನ್ನು ನೀವು ಮಾಡುತ್ತಿದ್ದೀರೆಂಬ ಭರವಸೆಯನ್ನು ಪ್ರಭುವೇ ನಮಗೆ ಕೊಟ್ಟಿದ್ದಾನೆ. ನೀವು ಇನ್ನು ಮುಂದೆಯೂ ಇವುಗಳನ್ನು ಮಾಡುವಿರೆಂದು ನಮಗೆ ತಿಳಿದಿದೆ. 5 ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆ ಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.

ಪ್ರತಿಯೊಬ್ಬರು ದುಡಿಯಲಿ

6 ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.

7 ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜತೆಯಲ್ಲಿಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ; 8 ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆ ಬಿಡದೆ ಕೆಲಸ ಮಾಡಿದೆವು. 9 “ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು.

10 ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.